
ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿರುವ ಘಟನೆ ನಡೆದಿದೆ.
ಮಂಜುಳಾ (25) ಮೃತ ಬಾಣಂತಿ. ಫೆ.10ರಂದು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಮಂಜುಳಾ ಅವರಿಗೆ ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಜುಳಾ ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಂಜುಳಾ, ಮಗುವಿಗೆ ಜನ್ಮ ನೀಡಿದ್ದ ಆರು ದಿನಗಳಲ್ಲೇ ಸಾವನ್ನಪ್ಪಿದ್ದಾರೆ.