ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬಳ್ಳಾರಿ ಬಿಮ್ಸ್, ಬೆಳಗಾವಿ ಜಿಲ್ಲಾಸ್ಪತ್ರೆ ಬಳಿಕ ಇದೀಗ ಶಿವಮೊಗ್ಗದಲ್ಲಿಯೂ ಬಾಣಂತಿ ಸಾವಿನ ಬಗ್ಗೆ ವರದಿಯಾಗಿದೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕವಿತಾ ಮೃತ ಬಾಣಂತಿ. ನಿನ್ನೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದಾವಣಗೆರೆ ಜಿಲ್ಲೆಯ ಹರಿಹರ ಮೂಲದ ಕವಿತಾ ಎರಡು ದಿನಗಳ ಹಿಂದೆ ಹೆರಿಗೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಬೆಳಿಗ್ಗೆ 8ಗಂಟೆಗೆ ಕವಿತಾ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆ ಬಳಿಕ ಕವಿತಾಗೆ ದೀಢೀರ್ ನೆ ರಕ್ತ ಹೆಪ್ಪುಗಟ್ಟಿದೆ. ಬಾಣಂತಿ ಕವಿತಾ ಕೊನೆಯುಸಿರೆಳೆದಿದ್ದಾರೆ. ರಕ್ತ ಹೆಪ್ಪುಗಟ್ಟಿ ಕವಿತಾ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತಾಯಿ ಮೃತಪಟ್ಟಿದ್ದರೂ ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಾಣಂತಿ ಸಾವನ್ನಪ್ಪಿ ಒಂದು ದಿನ ಕಳೆದರೂ ಕುಟುಂಬದವರು ಈವರೆಗೂ ಯಾವುದೇ ದೂರು ನೀಡಿಲ್ಲ ಎನ್ನಲಾಗಿದೆ.