ಶಿವಮೊಗ್ಗ: ನಗರದ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದೆ.
ಈ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದ್ದು, ಪೊಲೀಸರು ಇಂದು, ನಾಳೆಯೊಳಗೆ ಬಂಧಿಸಲಿದ್ದಾರೆ. ಯುವಕನ ಸಾವಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಪೊಲೀಸರು ಆರೋಪಿಗಳ ಬೆನ್ನು ಬಿದ್ದಿದ್ದಾರೆ. ಕಾನೂನು ಮೂಲಕವೇ ಶಿಕ್ಷೆ ಕೊಡಿಸಲಾಗುವುದು. ಯುವಕನ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.