ಶಿವಮೊಗ್ಗ: ಅಣ್ಣನೇ ತಮ್ಮನನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ನಡೆದ ಕೊಲೆಗೆ ಇಡೀ ಶಿವಮೊಗ್ಗ ಜಿಲ್ಲೆ ಬೆಚ್ಚಿ ಬಿದ್ದಿದೆ.
ಗಿರೀಶ್ ನಾಯ್ಕ್ (30) ಕೊಲೆಯಾದ ವ್ಯಕ್ತಿ. ಲೋಕೇಶ್ ನಾಯ್ಕ್ ಎಂಬಾತ ತನ್ನ ಸಹೋದರ ಗಿರೀಶ್ ನಾಯ್ಕ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಲಂಬಾಣಿ ತಾಂಡಾದಲ್ಲಿ ಈ ಘಟನೆ ನಡೆದಿದೆ.
ಅಣ್ಣ-ತಮ್ಮನ ನಡುವೆ ಗಲಾಟೆ ನಡೆದು, ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.