alex Certify ಬಜರಂಗದಳ ಹರ್ಷ ನಿವಾಸಕ್ಕೆ ಸಂಸದ ತೇಜಸ್ವಿ ಸೂರ್ಯ ಸೇರಿ ಹಲವು ಗಣ್ಯರ ಭೇಟಿ, ಸಾಂತ್ವನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಜರಂಗದಳ ಹರ್ಷ ನಿವಾಸಕ್ಕೆ ಸಂಸದ ತೇಜಸ್ವಿ ಸೂರ್ಯ ಸೇರಿ ಹಲವು ಗಣ್ಯರ ಭೇಟಿ, ಸಾಂತ್ವನ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದು, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಶಿವಮೊಗ್ಗದ ಸೀಗೆಹಟ್ಟಿಯಲ್ಲಿರುವ ಹರ್ಷ ಮನೆಗೆ ಭೇಟಿ ನೀಡಿದ ಅವರು ಪೋಷಕರು ಮತ್ತು ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.

ಬೆಳಿಗ್ಗೆಯಿಂದಲೂ ಹರ್ಷ ನಿವಾಸಕ್ಕೆ ಗಣ್ಯರು, ಸ್ವಾಮೀಜಿಗಳು ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಶ್ರೀ ಸಂತೋಷ್ ಗುರೂಜಿ, ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮೊದಲಾದ ಗಣ್ಯರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...