ಶಿವಮೊಗ್ಗ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪ ನಡೆದಿದೆ.
ಕುಶನ್ ಚಂದು(29) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಪರಶುರಾಮ ಎಂಬಾತ ಕೃತ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ರಾತ್ರಿ ಕುಶನ್ ಚಂದು ಸ್ನೇಹಿತನೊಂದಿಗೆ ಹೋಟೆಲ್ ಗೆ ಊಟಕ್ಕೆ ತೆರಳಿದ್ದ ವೇಳೆಯಲ್ಲಿ ಪರಶುರಾಮನೊಂದಿಗೆ ಜಗಳವಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಜಗಳದ ವೇಳೆ ಪರಶುರಾಮ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.