ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಚಿಕ್ರುಲ್ಲಾಖಾನ್(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ.
ಶನಿವಾರ ರಾತ್ರಿ 6 ಜನ ದುಷ್ಕರ್ಮಿಗಳು ಫಲಕ್ ಶಾದಿಮಹಲ್ ಸಮೀಪ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ವರು ಪರಾರಿಯಾಗಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.