alex Certify BIG BREAKING: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ: ಉದ್ವಿಗ್ನ ಸ್ಥಿತಿ, ಶಾಲೆ –ಕಾಲೇಜಿಗೆ ರಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ: ಉದ್ವಿಗ್ನ ಸ್ಥಿತಿ, ಶಾಲೆ –ಕಾಲೇಜಿಗೆ ರಜೆ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ. ಆಸ್ಪತ್ರೆ ಸೇರಿದಂತೆ ಹಲವೆಡೆ ಕಲ್ಲುತೂರಾಟ ನಡೆಸಲಾಗಿದ್ದು, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಗುಂಪುಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.

ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಎಂಬಾತನನ್ನು ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ಭಾನುವಾರ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಇದರಿಂದಾಗಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭಾರತೀ ಕಾಲೋನಿಯ ಅಂಗಡಿಯಲ್ಲಿ ಹರ್ಷ ಟೀ ಕುಡಿಯುವಾಗ ಕಾರ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ಕೂಡಲೇ ಹರ್ಷನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಮಂದಿ ಕಲ್ಲುತೂರಾಟ ನಡೆಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...