ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ.
ರುಕ್ಸಾನಾ(38) ಕೊಲೆಯಾದ ಮಹಿಳೆ. ಪತಿ ಯೂಸುಫ್ ಪತ್ನಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. 12 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಮೂವರು ಮಕ್ಕಳಿದ್ದಾರೆ. ಎಸಿ ಮೆಕಾನಿಕ್ ಆಗಿರುವ ಯೂಸುಫ್ ಕೌಟುಂಬಿಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳವಾಡಿದ್ದು, ಜಗಳದ ವೇಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ತುಂಗಾ ನಗರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ. ಆರೋಪಿ ಯೂಸುಫ್ ನನ್ನು ಬಂಧಿಸಲಾಗಿದೆ.