
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ನೂತನ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಸಚಿವ ಡಾ.ನಾರಾಯಣಗೌಡ ಅವರು ಇಂದು ಶಿವಮೊಗ್ಗಕ್ಕೆ ತೆರಳುವ ಮುನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಕಾವೇರಿ ನಿವಾಸದಲ್ಲಿ ಭೇಟಿಯಾದ ನಾರಾಯಣಗೌಡ, ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಕುರಿತು ಬಿ.ಎಸ್. ಯಡಿಯೂರಪ್ಪನವರ ಜೊತೆ ಚರ್ಚಿಸಿ, ಅಭಿವೃದ್ಧಿ ಕೆಲಸಗಳನ್ನ ಕೈಗೊಳ್ಳಲು ಮಾರ್ಗದರ್ಶನ ನೀಡುವಂತೆ ಕೋರಿದ್ದಾರೆ.