ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ವಿದ್ಯಾರ್ಥಿನಿಯ ಅಶ್ಲೀಲ ಫೋಟೋ ಹರಿಬಿಟ್ಟ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರದೀಪ್(25) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಸಾಗರದಲ್ಲಿ ಪಾಲುದಾರಿಕೆಯೊಂದಿಗೆ ಬಟ್ಟೆಯಂಗಡಿ ನಡೆಸುತ್ತಿರುವ ಪ್ರದೀಪ್ ಅನಂದಪುರ ಹೋಬಳಿಯ ಚೆನ್ನಶೆಟ್ಟಿಕೊಪ್ಪದವನಾಗಿದ್ದು, ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಅಪ್ರಾಪ್ತೆಯಾಗಿರುವ ವಿದ್ಯಾರ್ಥಿನಿಯೊಂದಿಗೆ ಸಲುಗೆ ಬೆಳೆಸಿಕೊಂಡು ಅಶ್ಲೀಲ ಫೋಟೋಗಳನ್ನು ತೆಗೆದುಕೊಂಡಿದ್ದ. ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ದೂರು ನೀಡಿದ್ದು, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.