alex Certify ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25 ರಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಮಾರ್ಚ್ 25ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 7.40 ಕ್ಕೆ ದೆಹಲಿಯಿಂದ ಹೊರಟು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ ಹೆಲಿಕಾಫ್ಟರ್ ಮೂಲಕ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ದಾವಣಗೆರೆಗೆ ಹೆಲಿಕಾಪ್ಟರ್ ಮೂಲಕ ತೆರಳಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪದಲ್ಲಿ ಭಾಗವಹಿಸಿದ ನಂತರ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಶಿವಮೊಗ್ಗದಿಂದ ನವದೆಹಲಿಗೆ ವಿಮಾನದಲ್ಲಿ ಪ್ರಯಾಣ ಬೆಳೆಸಲಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...