alex Certify ಲೋಕಸಭೆ ಚುನಾವಣೆ ಬಿಜೆಪಿ ಭರ್ಜರಿ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಬಿಜೆಪಿ ಭರ್ಜರಿ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಚಾಲನೆ

ಶಿವಮೊಗ್ಗ: ಲೋಕಸಭೆ ಚುನಾವಣೆ ಘೋಷಣೆ ನಂತರ ರಾಜ್ಯದಲ್ಲಿ ಪ್ರಧಾನಿ ಮೋದಿ ಮೊದಲ ಪ್ರಚಾರ ಕೈಗೊಂಡಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಶನಿವಾರವಷ್ಟೇ ಕಲಬುರಗಿಗೆ ಬಂದಿದ್ದ ಮೋದಿ ಇಂದು ಶಿವಮೊಗ್ಗದ ಸಮಾವೇಶದಲ್ಲಿ ಬಿಜೆಪಿ ಪ್ರಚಾರಕ್ಕೆ ಭರ್ಜರಿ ಚಾಲನೆ ನೀಡಲಿದ್ದಾರೆ.

ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಆಸನ ವ್ಯವಸ್ಥೆ ಮಾಡಲಾಗಿದೆ. ಐದು ಲೋಕಸಭಾ ಕ್ಷೇತ್ರಗಳ ಸಂಸದರು, ಶಾಸಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ವೇದಿಕೆ ಮೇಲೆ ಬಿಜೆಪಿ ಅಭ್ಯರ್ಥಿಗಳಾದ ಬಿ.ವೈ. ರಾಘವೇಂದ್ರ, ಗಾಯತ್ರಿ ಸಿದ್ದೇಶ್ವರ, ಕೋಟ ಶ್ರೀನಿವಾಸ ಪೂಜಾರಿ, ಬೃಜೇಶ್ ಚೌಟ, ನಾಯಕರಾದ ಯಡಿಯೂರಪ್ಪ, ವಿಜಯೇಂದ್ರ, ಸಿ.ಟಿ. ರವಿ, ಆರಗ ಜ್ಞಾನೇಂದ್ರ ಮೊದಲಾದವರು ಇರಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವ ಗುರಿಯೊಂದಿಗೆ ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ರಾಜ್ಯದಲ್ಲಿ ಮೋದಿ ಅವರ ಮೊದಲ ಪ್ರಚಾರ ಸಭೆ ಇದಾಗಿದ್ದು, ಭರ್ಜರಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಮಧ್ಯಾಹ್ನ 1.15ಕ್ಕೆ ಸಮಾವೇಶ ಆರಂಭವಾಗಲಿದೆ. ವೇದಿಕೆಯ ಎರಡು ಬದಿಯಲ್ಲಿ ಮೆಟರ್ ಡಿಟೆಕ್ಟರ್ ಅಳವಡಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ವೇದಿಕೆಯ ಹಿಂಭಾಗ ಮತ್ತು ಅಕ್ಕಪಕ್ಕದಲ್ಲಿ ತಾತ್ಕಾಲಿಕ ಕೊಠಡಿಗಳನ್ನು ನಿರ್ಮಿಸಲಾಗಿದೆ. ಎರಡು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಮೋದಿ ಸಾಗುವ ಮಾರ್ಗಗಳಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...