alex Certify ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ, ಅಮೃತ್ ನೋನಿ ನಕಲಿ ಉತ್ಪನ್ನಗಳು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ, ಅಮೃತ್ ನೋನಿ ನಕಲಿ ಉತ್ಪನ್ನಗಳು ವಶಕ್ಕೆ

ಶಿವಮೊಗ್ಗ: ವ್ಯಾಲ್ಯೂ ಪ್ರಾಡಕ್ಟ್ ಕಂಪನಿಯ ಅಮೃತ್ ನೋನಿ ಹೆಸರಿನಲ್ಲಿ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಶಿವಮೊಗ್ಗ ಪೊಲೀಸರು ಭೇದಿಸಿದ್ದಾರೆ.

ಮಾರ್ನಾಮಿ ಬೈಲ್ ನ ಅಶೋಕ ಎಂಬವರಿಗೆ ಸೇರಿದ ಫಾರ್ಮಾದಲ್ಲಿದ್ದ 31 ನಕಲಿ ಅಮೃತ್ ನೋನಿ ಔಷಧ ಬಾಕ್ಸ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ 7 ಲಕ್ಷ ರೂಪಾಯಿ ಮೌಲ್ಯದ 1100 ಬಾಟಲಿಗಳು ಇವೆ.

ಅಮೃತ್ ನೋನಿ ಹೆಸರಿನಲ್ಲಿ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಲ್ಯೂ ಪ್ರಾಡಕ್ಟ್ ಕಂಪನಿಯಿಂದ ದೂರು ನೀಡಲಾಗಿದ್ದು, ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ದಾಳಿ ಮಾಡಿ ಉತ್ಪನ್ನಗಳನ್ನು ಜಪ್ತಿ ಮಾಡಿದ್ದಾರೆ.

ಡಿವೈಎಸ್ಪಿ ಪ್ರಶಾಂತ ಮುನ್ನೋಳಿ, ದೊಡ್ಡಪೇಟೆ ಇನ್ಸ್ ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...