ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಭದ್ರಾವತಿಯ ಉಜ್ಜನೀಪುರದ ಮಾರಿಯಮ್ಮ ದೇವಾಲಯದ ಹಿಂಭಾಗದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಎಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಐವರನ್ನು ಬಂಧಿಸಲಾಗಿದೆ.
ದಾಳಿಯ ವೇಳೆ ಯೋಗೇಶ್ ಎಂಬಾತ ಪರಾರಿಯಾಗಿದ್ದಾನೆ. ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, 6 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.