ಶಿವಮೊಗ್ಗ: ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ, ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.