
ಶಿವಮೊಗ್ಗ: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅಸಭ್ಯ ಪದ ಬಳಕೆ ಮಾಡಿರುವ ರಮೇಶ ಜಾರಕಿಹೊಳಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಪಕ್ಷದ ಕಚೇರಿ ಎದುರು ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕೂಡಲೇ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಕೆ. ದೇವೇಂದ್ರಪ್ಪ, ಮುಖ್ತಿಯಾರ್, ಸಾಮಾಜಿಕ ಜಾಲತಾಣ ರಾಜ್ಯ ಕಾರ್ಯದರ್ಶಿ ಸೌಗಂಧಿಕಾ ರಘುನಾಥ್, ಮಹಾನಗರ ಪಾಲಿಕೆ ಸದಸ್ಯರಾದ ಯಮುನಾ ರಂಗೇಗೌಡ, ರಮೇಶ್ ಹೆಗ್ಡೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಕವಿತಾ ರಾಘವೇಂದ್ರ, ಸೈಯದ್ ವಾಹೀದ್ ಅಡ್ಡು ಮೊದಲಾದವವರಿದ್ದರು.