alex Certify ಶಿವಮೊಗ್ಗ: ಸಂಬಂಧಿಯಿಂದಲೇ ನೀಚಕೃತ್ಯ, ಅತ್ಯಾಚಾರದ ವಿಡಿಯೋ ಚಿತ್ರೀಕರಣ ಮಾಡಿ ಹರಿಬಿಟ್ಟ ಕಿಡಿಗೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ಸಂಬಂಧಿಯಿಂದಲೇ ನೀಚಕೃತ್ಯ, ಅತ್ಯಾಚಾರದ ವಿಡಿಯೋ ಚಿತ್ರೀಕರಣ ಮಾಡಿ ಹರಿಬಿಟ್ಟ ಕಿಡಿಗೇಡಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನಲ್ಲಿ ಬಾಲಕಿಯ ಮೇಲೆ ಸಂಬಂಧಿಯೇ ಅತ್ಯಾಚಾರ ಎಸಗಿದ್ದಾನೆ. ಕೃತ್ಯದ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.

38 ವರ್ಷದ ತೇಜ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ. ತನ್ನ ಸಂಬಂಧಿಯಾಗಿರುವ 9 ನೇ ತರಗತಿ ವಿದ್ಯಾರ್ಥಿನಿ ಕಳೆದ ಶನಿವಾರ ಮನೆಗೆ ಬಂದಿದ್ದ ಸಂದರ್ಭದಲ್ಲಿ ಅತ್ಯಾಚಾರ ಎಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾನೆ. ವಿಷಯವನ್ನು ಯಾರಿಗೂ ಹೇಳದಂತೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಸೊರಬ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...