
ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರಕ್ಕೆ ಘರ್ಷಣೆ ಉಂಟಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ, ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳಿಗೆ ದಿನಾಂಕ 16/08/2022 ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಅದೇ ರೀತಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.