
ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಎರಡು ಗುಂಪುಗಳಿಂದ ನಡೆದ ಪರಸ್ಪರ ಕಲ್ಲು ತೂರಾಟದಿಂದ ಮನೆಗಳು, ವಾಹನಗಳ ಗಾಜು ಪುಡಿಪುಡಿಯಾಗಿವೆ. ಪೊಲೀಸರು, ರ್ಯಾಪಿಡ್ ಆಕ್ಷನ್ ಫೋರ್ಸ್ ತಕ್ಷಣ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದೆ. ಸ್ಥಳಕ್ಕೆ ಎಸ್.ಪಿ. ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಗಿ ಭದ್ರತೆಯಲ್ಲಿ ಈದ್ ಮೆರವಣಿಗೆ ನಡೆದಿದ್ದು, ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಲಾಗಿದೆ. ಎರಡೂ ಗುಂಪಿನವರಿಂದ ನಡೆದ ಕಲ್ಲು ತೂರಾಟದಲ್ಲಿ ಮನೆಗಳು, ವಾಹನಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.