alex Certify ರಾತ್ರಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ: ಶಿವಮೊಗ್ಗ ಉದ್ವಿಗ್ನ; ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ: ಶಿವಮೊಗ್ಗ ಉದ್ವಿಗ್ನ; ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಮತ್ತೂರು ರಸ್ತೆಯ ಇಂದಿರಾನಗರ ಸೂಳೆಬೈಲು ಬಡಾವಣೆಯಲ್ಲಿ ಅನ್ಯಕೋಮಿನ ಯುವಕರ ಗುಂಪು ಕಾರ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಮತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕಾರ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಇಂದಿರಾನಗರದ ಅನ್ಯಕೋಮಿನ ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದೆ. ರಸ್ತೆಯ ಹಂಪ್ ಬಳಿ ಕಾರ್ ನಿಧಾನವಾಗುತ್ತಿದ್ದಂತೆ ಕಲ್ಲುತೂರಾಟ ನಡೆಸಲಾಗಿದ್ದು, ನೂರಾರು ಜನರು ಸೇರಿಕೊಂಡು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಮುಖಂಡರು, ಹಿಂದೂ ಸಂಘಟನೆಯ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ, ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...