ಶಿವಮೊಗ್ಗ: ಕೊರೋನಾ ಸೋಂಕು, ಲಾಕ್ಡೌನ್ ಕಾರಣದಿಂದ ಸ್ಥಗಿತಗೊಳಿಸಲಾಗಿದ್ದ ರೈಲು ಸಂಚಾರ ನಾಳೆಯಿಂದ ಪುನರಾರಂಭವಾಗಲಿದೆ.
ಜೂನ್ 18 ರಿಂದ ಜನಶತಾಬ್ದಿ ಸೇರಿದಂತೆ ಎರಡು ರೈಲುಗಳ ಸಂಚಾರ ಆರಂಭವಾಗಲಿದೆ. ಆನ್ಲೈನ್ ಟಿಕೆಟ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡಲಾಗಿದೆ.
ಜನಶತಾಬ್ದಿ ರೈಲು ಸಂಜೆ 5.15 ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 9.55 ಕ್ಕೆ ಶಿವಮೊಗ್ಗ ತಲುಪಲಿದೆ. ಬೆಳಗ್ಗೆ 5.15 ಕ್ಕೆ ಶಿವಮೊಗ್ಗದಿಂದ ಹೊರಟು 10.15 ಕ್ಕೆ ಬೆಂಗಳೂರು ತಲುಪಲಿದೆ.
ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಡುವ ರೈಲು ಸಂಜೆ 7.45 ಕ್ಕೆ ಶಿವಮೊಗ್ಗ, ರಾತ್ರಿ 10 ಗಂಟೆಗೆ ತಾಳಗುಪ್ಪ ತಲುಪಲಿದೆ. ಅದೇ ರೈಲು ಬೆಳಿಗ್ಗೆ 5 ಗಂಟೆಗೆ ತಾಳಗುಪ್ಪದಿಂದ ಹೊರಟು 7 ಗಂಟೆಗೆ ಶಿವಮೊಗ್ಗ ತಲುಪಲಿದ್ದು, 7.05 ಗಂಟೆಗೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ.