alex Certify
ಕನ್ನಡ ದುನಿಯಾ
       

Kannada Duniya

BIG BREAKING: ಮುಂಗಾರು ಮಳೆಗೆ ರಾಜ್ಯದಲ್ಲೇ ಮೊದಲಿಗೆ ಶಿವಮೊಗ್ಗ ತುಂಗಾ ಡ್ಯಾಂ ಭರ್ತಿ, 21 ಗೇಟ್ ಮೂಲಕ ನೀರು ಹೊರಕ್ಕೆ

ಶಿವಮೊಗ್ಗ: ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ ಭರ್ತಿಯಾಗಿದ್ದು, 21 ಗೇಟ್ ಗಳನ್ನು ತೆರೆದು ನೀರನ್ನು ಹೊರ ಬಿಡಲಾಗುತ್ತಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಜಲಾಶಯಕ್ಕೆ ನೀರು ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಲ್ಲಿ ನ 22 ಗೇಟುಗಳ ಪೈಕಿ 21 ಗೇಟುಗಳನ್ನು ತೆರೆದು ನೀರನ್ನು ಹೊರಬಿಡಲಾಗುತ್ತಿದೆ.

ವಿದ್ಯುತ್ ಉತ್ಪಾದನೆ ಮತ್ತು ನದಿಗೆ ತುಂಗಾ ಜಲಾಶಯದಿಂದ ಒಟ್ಟು 7300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ತುಂಗಾ ಡ್ಯಾಂ ನಲ್ಲಿ 3.24 ಟಿಎಂಸಿ ನೀರು ಸಾಮರ್ಥ್ಯ ಹೊಂದಿದ್ದು 2.411 ಟಿಎಂಸಿ ನೀರಿದೆ. 3774 ಕ್ಯೂಸೆಕ್ ಒಳಹರಿವು ಇದೆ. ಡ್ಯಾಂಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೀರನ್ನು ಹೊರ ಬಿಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...