
ಶಿವಮೊಗ್ಗ: ಮೂವರ ಶವ ತುಂಗಾ ನದಿಯ ಹಿನ್ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಸಕ್ರೇಬೈಲ್ ಆನೆ ಬಿಡಾರದ ಬಳಿ ತುಂಗಾ ನದಿಯ ಹಿನ್ನೀರಿನಲ್ಲಿ ಮೂರು ಶವಗಳು ಪತ್ತೆಯಾಗಿವೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಇದಾಗಿದೆ.
ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಮೂವರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.