ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಆರಂಭವಾಗಿದ್ದು, 2026ರರೊಳಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಶಿವಮೊಗ್ಗಕ್ಕೆ ಭೇಟಿ ನೀಡಿದ ಸಚಿವ ವಿ.ಸೋಮಣ್ಣ, ಕೋಟೆ ಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ಜೂನ್ ನಲ್ಲಿ ಕಾಮಗಾರಿ ಮುಗಿಯಲಿದೆ ಎಂದರು.
ಇನ್ನು ಎರಡರಿಂದ ಮೂರು ತಿಂಗಳಲ್ಲಿ ವಂದೇ ಭಾರತ್ ರೈಲು ಶಿವಮೊಗ್ಗಕ್ಕೆ ಬರಲಿದೆ ಎಂದು ಹೇಳಿದರು. ಕೋಟೆ ಗಂಗೂರಿನಲ್ಲಿ ಸುಮಾರು 100 ಕೋಟಿ ವೆಚ್ಚದಲ್ಲಿ ರೈಲ್ವೆ ಕೋಚಿಂಗ್ ಡಿಪೋ ನಿರ್ಮಾಣವಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ ಯಾವುದೇ ಕಳಪೆ ಕಾಮಗಾರಿ ನಡೆದರೆ ಸಹಿಸಲ್ಲ. ರೈಲ್ವೆ ಇಲಾಖೆ ಎಂಬುದು ರಕ್ಷಣಾ ಇಲಾಖೆ ಇದ್ದಂತೆ ಎಂದು ಹೇಳಿದರು.