alex Certify BIG NEWS: ಸಾವರ್ಕರ್ ಭಾವಚಿತ್ರ ಪ್ರದರ್ಶನಕ್ಕೆ ಆಕ್ಷೇಪ; ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾವರ್ಕರ್ ಭಾವಚಿತ್ರ ಪ್ರದರ್ಶನಕ್ಕೆ ಆಕ್ಷೇಪ; ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ

ಶಿವಮೊಗ್ಗ: ವೀರ್ ಸಾವರ್ಕರ್ ಭಾವಚಿತ್ರ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿದ್ದು ಶಿವಮೊಗ್ಗ ಜಿಲ್ಲೆಯ ಬೇರಿಸ್ ಸೆಂಟರ್ ಮಾಲ್ ನಲ್ಲಿ ಉದ್ವಿಗ್ನ ಪರಿಸ್ಥಿತಿಯುಂಟಾಗಿದೆ.

ಮಾಲ್ ಪ್ರವೇಶ ದ್ವಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ವೇಳೆ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರ ಹಾಕಿದ್ದಕ್ಕೆ ಸಾಮಾಜಿಕ ಹೋರಾಟಗಾರ ಶರೀಫ್ ಹಾಗೂ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾವರ್ಕರ್ ಭಾವಚಿತ್ರ ಯಾಕೆ ಹಾಕಿದ್ದೀರಿ? ಮೌಲಾನಾ ಅಬುಲ್ ಕಲಂ ಆಜಾದ್ ಭಾವಚಿತ್ರ ಯಾಕೆ ಹಾಕಿಲ್ಲ? ಮುಸ್ಲಿಂ ಎಂಬ ಕಾರಣಕ್ಕೆ ತಾರತಮ್ಯ ಮಾಡುತ್ತಿದ್ದೀರಾ? ಎಂದು ಗಲಾಟೆ ನಡೆಸಿದ್ದಾರೆ. ಸ್ಥಳಕ್ಕೆ ಶಿವಮೊಗ್ಗ ಪಾಲಿಕೆ ಮೇಯರ್, ಉಪಮೇಯರ್ ಭೇಟಿ ನೀಡಿದ್ದು, ಯಾವ ಕಾರಣಕ್ಕೂ ಸಾವರ್ಕರ್ ಹಾಗೂ ಯಾವುದೇ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ತೆಗೆಯದಂತೆ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...