
ಶಿವಮೊಗ್ಗ: ಪತಿ-ಪತ್ನಿ ನಡುವಿನ ಜಗಳಕ್ಕೆ ಬೇಸತ್ತ ಪತ್ನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾನಗರದಲ್ಲಿ ನಡೆದಿದೆ.
ಕಮಲಾ ಬಿ.ಪಿ (35) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ತಡರಾತ್ರಿ ತಾಳಗುಪ್ಪ-ಮೈಸೂರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. ವಿನೋಬಾನಗರ ರೈಲ್ವೆ ಟ್ರ್ಯಾಕ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಮಹಿಳೆಯ ದೇಹ, ತಲೆ, ಕೈಗಳು ಛಿದ್ರಗೊಂಡು ಬೇರ್ಪಟ್ಟಿವೆ. ಕಮಲಾ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಪತಿ-ಪತ್ನಿ ನಡುವೆ ಜಗಳವಾಗಿದೆ. ಪತಿಯ ಮಾತಿಗೆ ನೊಂದ ಕಮಲಾ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿನೋಬಾನಗರ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.