
ಶಿವಮೊಗ್ಗ: ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳಬೇಕಿದ್ದ ಸ್ಟಾರ್ ಏರ್ ಲೈನ್ಸ್ ವಿಮಾನ ಏಕಾಏಕಿ ರದ್ದಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳಬೇಕಿದ್ದ ವಿಮಾನ ರದ್ದಾಗಿದೆ. ಸ್ಟಾರ್ ಏರ್ ಲೈನ್ಸ್ ವಿಮಾನದಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣಿಸುವವರಿದ್ದರು. ಆದರೆ ಹವಾಮಾನ ವೈಪರೀತ್ಯದಿಂದ ವಿಮಾನ ಹಾರಟ ರದ್ದಾಗಿದೆ.
ಕಳೆದ ಮೂರು ಗಂಟೆಯಿಂದ ಶಿವಮೊಗ್ಗ ಏರ್ ಪೋರ್ಟ್ ನಲ್ಲಿಯೇ ಪ್ರಯಾಣಿಕರು ಪರದಾಡುತ್ತಿದ್ದಾರೆ. ಸ್ಟಾರ್ ಏರ್ ನಿಂದ ಬದಲಿ ವ್ಯವಸ್ಥೆಯನ್ನು ಮಾಡಿಲ್ಲ, ಸೂಕ್ತ ಮಾಹಿತಿಯನ್ನೂ ನೀಡುತ್ತಿಲ್ಲ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.