ಶಿವಮೊಗ್ಗ: ಧನುರ್ಮಾಸ ಹಿನ್ನೆಲೆಯಲ್ಲಿ ಮುಂಜಾನೆ ದೇವಸ್ಥಾನಕ್ಕೆ ಹೋಗಿ ಮನೆಗೆ ವಾಪಾಸ್ ಆಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರವನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆದಿಚುಂಚನಗಿರಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಧನುರ್ಮಾಸ ಹಿನ್ನೆಲೆಯಲ್ಲಿ ಲಲಿತಾ ಎಂಬ ಮಹಿಳೆ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ. ಆದಿಚುಂಚನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದೇ ವೇಳೆ ಇನ್ನೊಂದು ಪ್ರಕರಣದಲ್ಲಿ ಯುವತಿಯೊಬ್ಬರು ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾರೆ. ವಿನೋಬನಗರದ 60 ಅಡಿ ರಸ್ತೆಯಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ.
ಮತ್ತೊಂದು ಪ್ರಕರಣದಲ್ಲಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಅಪರಿಚಿತರು ಮಹಿಳೆಯ ಕತ್ತಿನಲ್ಲಿದ್ದ ಸರ ಕದಿಯಲು ಯತ್ನಿಸಿ ವಿಫಲರಾಗಿದ್ದಾರೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಶಿವಮೊಗ್ಗದಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ಹಲವೆಡೆಗಳಲ್ಲಿ ಬೈಕ್ ನಲ್ಲಿ ಬಂದು ಮಹಿಳೆಯರ ಚಿನ್ನದ ಸರಗಳನ್ನು ಕದ್ದು ಪರಾರಿಯಾಗುತ್ತಿದ್ದು, ಸಾರ್ವಜನಿಕರು ಆತಂಕದಿಂದ ಕಾಲಕಳೆಯುಂವತಾಗಿದೆ.