alex Certify ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಹೆಚ್ಚುವರಿ 7,000 ಮೆ. ಟನ್ ಕೊಬ್ಬರಿ ಖರೀದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಹೆಚ್ಚುವರಿ 7,000 ಮೆ. ಟನ್ ಕೊಬ್ಬರಿ ಖರೀದಿ

ಬೆಂಗಳೂರು: ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಹೆಚ್ಚುವರಿಯಾಗಿ 7,000 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಗೆ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಈ ವರ್ಷ ಒಟ್ಟು 69,500 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಸಲಾಗುವುದು. ಮಿಲ್ಲಿಂಗ್ ಕೊಬ್ಬರಿ ಖರೀದಿಗೂ ಅನುಮತಿ ನೀಡುವಂತೆ ಪ್ರಯತ್ನ ನಡೆಸುವುದಾಗಿ ತಿಳಿಸಿದ್ದಾರೆ.

62,500 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಗೆ ಈಗಾಗಲೇ ಅನುಮತಿ ನೀಡಲಾಗಿದ್ದು, ರಾಜ್ಯ ಸರ್ಕಾರದ ಪ್ರಯತ್ನದಿಂದ ಹೆಚ್ಚುವರಿ 7 ಸಾವಿರ ಮೆಟ್ರಿಕ್ ಟನ್ ಖರೀದಿಗೆ ಅನುಮತಿ ದೊರೆತಿದೆ. ನೋಂದಣಿ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಪ್ರತಿ ಖರೀದಿ ಕೇಂದ್ರದಲ್ಲಿ ಆರು ಕೌಂಟರ್ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...