ಬೆಳಗಾವಿ(ಸುವರ್ಣಸೌಧ): ನೂತನ ಜವಳಿ ನೀತಿಯಲ್ಲಿ ಕೈಮಗ್ಗ ನೇಕಾರರಿಗೆ ಆದ್ಯತೆ ನೀಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸಿ.ಬಿ. ಸುರೇಶ ಬಾಬು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗುಜರಾತ್, ತಮಿಳುನಾಡು ರಾಜ್ಯಗಳಿಗೆ ಹೋಲಿಸಿದಲ್ಲಿ ನಮ್ಮಲ್ಲಿ ಕೈಮಗ್ಗ ನೇಕಾರರಿಗೆ ಹೆಚ್ಚಿನ ಸೌಲಭ್ಯವಿಲ್ಲ. ಆ ರಾಜ್ಯಗಳಲ್ಲಿ ಕೈಮಗ್ಗ ನೇಕಾರರ ಉತ್ಪನ್ನಗಳಿಗೆ ರಾಜ್ಯದ ಕೈಮಗ್ಗ ನೇಕಾರರು ಪೈಪೋಟಿ ನೀಡದ ಸ್ಥಿತಿಯಲ್ಲಿ ಇದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ನೂತನ ಜವಳಿ ನೀತಿ ರಚಿಸಲಾಗುತ್ತಿದೆ. ಇದರಲ್ಲಿ ಕೈಮಗ್ಗ ಉತ್ತೇಜನಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ನೇಕಾರರ ಪ್ಯಾಕೇಜ್ ಯೋಜನೆಯಡಿ 10 ಹೆಚ್.ಪಿ. ವರೆಗೆ ವಿದ್ಯುತ್ ಸೇರಿ ಹಲವು ಸೌಲಭ್ಯ ಕಲ್ಪಿಸಲಾಗಿದೆ. ಈ ರೀತಿ ವಿದ್ಯುತ್ ಮಗ್ಗಗಳಿಗೆ 10 ಹೆಚ್.ಪಿ. ವರೆಗೆ ಉಚಿತ ವಿದ್ಯುತ್ ನೀಡಿದ ಮೊದಲ ರಾಜ್ಯ ನಮ್ಮದಾಗಿದೆ ಎಂದು ಹೇಳಿದ್ದಾರೆ.