ಮಂಡ್ಯ ಜಿಲ್ಲೆ ಶಿವನಸಮುದ್ರ ಜಲಪಾತ ವೀಕ್ಷಿಸಲು ಇತ್ತೀಚೆಗೆ ತೆರಳಿದ್ದ ಪ್ರವಾಸಿಗರೊಬ್ಬರು ಅಲ್ಲಿನ ಕಸದ ರಾಶಿ ಕಂಡು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರು.
ಪ್ರವಾಸಿಗರ ಈ ಸೋಶಿಯಲ್ ಮೀಡಿಯಾ ಪೋಸ್ಟ್ ಗೆ ತಕ್ಷಣವೇ ಸ್ಪಂದಿಸಿದ ಅಧಿಕಾರಿಗಳು, ಶಿವನಸಮುದ್ರ ಜಲಪಾತದ ಬಳಿ ಇದ್ದ ಕಸದ ರಾಶಿಯನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ಪೂರ್ಣಗೊಳಿಸಿದ್ದಾರೆ. ಸಿಎಂ ಕಚೇರಿಯ ತಕ್ಷಣದ ಸ್ಪಂದನೆಗೆ ಪ್ರವಾಸಿಗರು ಸಂತಸಗೊಂಡಿದ್ದಾರೆ.
ಸಾರ್ವಜನಿಕರು ತಾವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಕಚೇರಿಯ ಗಮನಕ್ಕೆ ತರಲು ವಿಶೇಷ ಕರ್ತವ್ಯಾಧಿಕಾರಿಗಳ ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆ @osd_cmkarnataka ಗೆ ಟ್ಯಾಗ್ ಮಾಡಬಹುದಾಗಿದೆ.
You Might Also Like
TAGGED:shivanasamudra