alex Certify ಶಕ್ತಿಧಾಮಕ್ಕೆ 5 ಕೋಟಿ ರೂ.: ಸಿಎಂ ಘೋಷಣೆ: ಬೊಮ್ಮಾಯಿ ಹಾಡಿ ಹೊಗಳಿದ ಶಿವಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಕ್ತಿಧಾಮಕ್ಕೆ 5 ಕೋಟಿ ರೂ.: ಸಿಎಂ ಘೋಷಣೆ: ಬೊಮ್ಮಾಯಿ ಹಾಡಿ ಹೊಗಳಿದ ಶಿವಣ್ಣ

ಮೈಸೂರು: ಶಕ್ತಿಧಾಮ ವಿದ್ಯಾಶಾಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಶಕ್ತಿಧಾಮದಲ್ಲಿ ವಿದ್ಯಾಶಾಲೆಗಳು ಶಂಕುಸ್ಥಾಪನೆ ನೆರವೇರಿಸಿದ್ದು, ಕಾರ್ಯಕ್ರಮದಲ್ಲಿ ಸಿಎಂ ಅವರನ್ನು ಶಿವಣ್ಣ ಹಾಡಿಹೊಗಳಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಕಾಮನ್ ಮ್ಯಾನ್. ನಾನು ಯಾವತ್ತೂ ಇಂತಹ ಮುಖ್ಯಮಂತ್ರಿಯನ್ನು ನೋಡಿಲ್ಲ. ಅವರು ತುಂಬಾ ಸಿಂಪಲ್. ನಮ್ಮ ಕುಟುಂಬದ ಮೇಲೆ ಅಪಾರ ಗೌರವ ಇಟ್ಟಿದ್ದಾರೆ. ಅಪ್ಪು ಅಂತ್ಯಕ್ರಿಯೆ ವೇಳೆಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದರು. ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಶಕ್ತಿಧಾಮದಲ್ಲಿ ಶಿವರಾಜ್ ಕುಮಾರ್ ಹೇಳಿದ್ದಾರೆ.

ನಮಗೆ ದುಃಖ ಆದಾಗ ಶಕ್ತಿಧಾಮಕ್ಕೆ ಬರುತ್ತೇವೆ. ಪುನೀತ್ ನನ್ನು ಈ ಮಕ್ಕಳಲ್ಲಿ ನೋಡುತ್ತೇವೆ ಎಂದು ಶಿವರಾಜ್ ಕುಮಾರ್ ಹೇಳಿದರು.

ಶಕ್ತಿಧಾಮಕ್ಕೆ ಸರ್ಕಾರ 5 ಕೋಟಿ ರೂಪಾಯಿ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹೆಣ್ಣು ಮಕ್ಕಳ ಅಭಿವೃದ್ಧಿಗೆ ಬಜೆಟ್ನಲ್ಲಿ 40,900 ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಶಕ್ತಿಧಾಮ 5 ಕೋಟಿ ರೂಪಾಯಿ ನೀಡಲಾಗುವುದು ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...