ಭೈರತಿ ರಣಗಲ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ನಟ ಶಿವರಾಜ್ ಕುಮಾರ್, ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ. ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಶಿವಣ್ಣ ಮುಡಿ ಕೊಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ.
ಶಿವರಾಜ್ ಕುಮಾರ್ ಜೊತೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡ ತಿರುಪತಿಯಲ್ಲಿ ಮುಡಿ ಕೊಟ್ಟಿದ್ದಾರೆ. ಶಿವಣ್ಣ ಕುಟುಂಬ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನವನ್ನು ಪಡೆದುಕೊಂಡಿದ್ದಾರೆ.
ಶಿವರಾಜ್ ಕುಮಾರ್ ಸದ್ಯದಲ್ಲೇ ವಿದೇಶಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಚಿಕಿತ್ಸೆಗಾಗಿ ಶಿವರಾಜ್ ಕುಮಾರ್ ಅಮೆರಿಕಾಗೆ ತೆರಳಲಿದ್ದು, ಇದೇ ಕಾರಣಕ್ಕಾಗಿ ಕೆಲ ಸಿನಿಮಾ ಕೆಲಸಗಳನ್ನು ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ. ವಿದೇಶಕ್ಕೆ ತೆರಳುವ ಮುನ್ನ ಶಿವಣ್ಣ ದಂಪತಿ ತಿರುಪತಿಗೆ ತೆರಳಿ ತಿಮ್ಮಪನ ದರ್ಶನ ಪಡೆದಿದೆ.