ಬೆಂಗಳೂರು: ದೊಡ್ಮನೆ ಹುಡುಗ, ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ಬಾಳಲ್ಲಿ ಬಿರುಕು ಮೂಡಿದ್ದು, ಯುವ ರಾಜ್ ಕುಮಾರ್ ಪತ್ನಿಗೆ ವಿಚ್ಛೇದನ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಬೆಳವಣಿಗೆಗಳ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ನಟ ಶಿವರಾಜ್ ಕುಮಾರ್, ಈ ವಿಚಾರದ ಬಗ್ಗೆ ನನಗೆ ಮಾಹಿತಿಯೇ ಇಲ್ಲ. ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.
ಗೊತ್ತಿದ್ದರೆ ಮಾತನಾಡಬಹುದು. ಆದರೆ ಗೊತ್ತಿಲ್ಲದ ವಿಚಾರದ ಬಗ್ಗೆ ಮಾತನಾಡುವುದು ಸರಿಯಲ್ಲ. ಈಗಷ್ಟೇ ಮೊಬೈಲ್ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆದರೆ ಮನಸ್ಸಿಗೆ ಬೇಜಾರಾಗುತ್ತೆ ಎಂದು ಹೇಳಿದ್ದಾರೆ.
ಯುವ ರಾಜ್ ಕುಮಾರ್- ಶ್ರೀದೇವಿ ಅವರ ವಿಚಾರವಾಗಿ ಸದ್ಯಕ್ಕೆ ನಮಗೆ ಮಾಹಿತಿ ಇಲ್ಲ. ನಾವು ಬೆಂಗಳೂರಿಗೆ ಹೋಗುತ್ತಿದ್ದೇವೆ. ಹೋದ ಬಳಿಕ ಮಾತನಾಡುತೇನೆ ಏನಾಗುತ್ತೆ ನೋಡೋಣ ಎಂದು ತಿಳಿಸಿದ್ದಾರೆ.