
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಹಿರಂಗವಾಗಿ ಲೋಕಸಭಾ ಟಿಕೆಟ್ ಆಫರ್ ನೀಡಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಆರ್ಯ ಈಡಿಗ ಸಂಘದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ಆಫರ್ ನೀಡಿದರು. ‘ಶಿವರಾಜ್ ಕುಮಾರ್ ನೀನು ರೆಡಿಯಾಗಪ್ಪ ಲೋಕಸಭೆಗೆ’ ಎಂದು ಹೇಳಿದ್ದೇನೆ ಎಂದರು.
5-6 ಸಿನಿಮಾ ಶೂಟಿಂಗ್ ಇದೆ ಎಂದು ಹೇಳಿದ್ದಾರೆ. ಸಿನಿಮಾ ಯಾವಾಗ ಬೇಕಾದರೂ ಮಾಡಬಹುದು. ಆದರೆ ಯಾವಗ ಬೇಕಾದರೂ ಸಂಸತ್ ಸದಸ್ಯನಾಗಲು ಸಾಧ್ಯವಿಲ್ಲ. ನಿಮ್ಮ ಮನೆಗೆ ಭಾಗ್ಯ ಬಂದಿದೆ ಎಂದು ಹೇಳಿದ್ದಾರೆ.