
ಹುಬ್ಬಳ್ಳಿ: ನಾವು ಪಕ್ಷಕ್ಕೆ ಸೇರಿಸಿಕೊಳ್ಳಲು ಶುರು ಮಾಡಿದರೆ ಬಿಜೆಪಿ, ಜೆಡಿಎಸ್ ನಲ್ಲಿ ಯಾರೂ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾವು ಏನಾದರೂ ಪಕ್ಷಕ್ಕೆ ಕರೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದರೆ ಜೆಡಿಎಸ್, ಬಿಜೆಪಿಯಲ್ಲಿ ಯಾರೂ ಕೂಡ ಇರಲ್ಲ. ನಾವು ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ನಮ್ಮ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಬರುವವರು ಇದ್ದರೆ ಬರಬಹುದು ಎಂದು ಹೇಳದ್ದಾರೆ.
ದ್ವೇಷದ ರಾಜಕಾರಣ ಮಾಡುವವರು ಬಿಜೆಪಿಯವರು. ಬಡವರು, ಮಧ್ಯಮ ವರ್ಗದವರಿಗೆ ಒಂದೇ ಒಂದು ಯೋಜನೆ ತಂದಿಲ್ಲ. ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಕ್ಕೆ ಕಡಿವಾಣ ಹಾಕುತ್ತಿದ್ದೇವೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪೆನ್ ಡ್ರೈವ್ ನಲ್ಲಿ ಏನೇನು ಇಲ್ಲ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.