alex Certify ಕಾಂಗ್ರೆಸ್ ಅಭ್ಯರ್ಥಿ ಗೀತಾ ಗೆಲುವಿಗೆ ನಟ ಶಿವಣ್ಣ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಅಭ್ಯರ್ಥಿ ಗೀತಾ ಗೆಲುವಿಗೆ ನಟ ಶಿವಣ್ಣ ಪ್ರಚಾರ

ಹುಬ್ಬಳ್ಳಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸಲು ಖುದ್ದು ನಾನೇ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿ, ಗೀತಾ ಶಿವರಾಜ್ ಕುಮಾರ್ ಅವರಿಗೆ ಮೊದಲಿನಿಂದಲೂ ಶಿವಮೊಗ್ಗದ ಜೊತೆ ಉತ್ತಮ ಒಡನಾಟವಿದೆ. ಅವರನ್ನು ಗೆಲ್ಲಿಸಲು ನಾನೇ ಪ್ರಚಾರ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕರು ಆಹ್ವಾನ ನೀಡಿದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತೇನೆ. ರಾಜ್ಯಾದ್ಯಂತ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತೇನೆ. ಜೊತೆಗೆ ಪತ್ನಿ ಸ್ಪರ್ಧಿಸಿರುವ ಶಿವಮೊಗ್ಗ ಕ್ಷೇತ್ರ ಗೆಲ್ಲುವುದು ಕೂಡ ನಮ್ಮ ಪ್ರಮುಖ ಗುರಿಯಾಗಿದೆ. ಸಮಯ ನೋಡಿಕೊಂಡು ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...