ಬೆಂಗಳೂರು: ಆಟೋ ಮತ್ತು ಬಸ್ ಚಾಲಕರು, ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಒಳಪಡುವ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಮೃತಪಟ್ಟ ಸಂದರ್ಭದಲ್ಲಿ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಮುಂದಿನ ಅಧಿವೇಶನದಲ್ಲಿ ಈ ಕುರಿತ ಮಸೂದೆ ಮಂಡಿಸಲಾಗುವುದು.
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ರಿಕ್ಷಾ, ಬಸ್ ಚಾಲಕರು, ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಮೃತಪಟ್ಟ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯಿಂದ 5 ಲಕ್ಷ ರೂ. ನೀಡಲಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.