
ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಪ್ರಯಾಣಿಸಲು ಬಸ್ ಪಾಸ್ ವಿತರಣೆ ಮಾಡಲಾಗಿದೆ.
ಕಾರ್ಮಿಕರಿಗೆ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಪಾಸ್ ಗಳನ್ನು ನೀಡಲಾಗಿದ್ದು, ಬೆಂಗಳೂರಿಗೆ ಸೀಮಿತವಾಗಿದ್ದ ಉಚಿತ ಬಸ್ ಪಾಸ್ ಗಳನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗಿದೆ.
ಉಚಿತ ಸಾರಿಗೆ ವ್ಯವಸ್ಥೆಗೆ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಚಾಲನೆ ನೀಡಿದ್ದು, ಈ ಉಚಿತ ಪಾಸ್ ಬಳಸಿಕೊಂಡು ಕೆಲಸದ ಸ್ಥಳಕ್ಕೆ ತೆರಳಲು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಹೇಳಲಾಗಿದೆ.