ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಚುರುಕಿನಿಂದ ಸಾಗಿದೆ. ಈ ನಡುವೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿಪ್ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ಗೆ ಮತಹಾಕುವ ಮೂಲಕ ಅಡ್ಡ ಮತದಾನ ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಶಾಸಕ ಶಿವರಾಮ್ ಹೆಬ್ಬಾರ್ ನಡೆ ಕೂಡ ಕುತೂಹಲ ಮೂಡಿಸಿದೆ.
ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಅಡ್ಡ ಮತದಾನ ಮಾಡುವ ಭೀತಿ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಮ್ಮೆ ಶಾಸಕರಿಗೆ ವಿಪ್ ಜಾರಿ ಮಾಡಿದೆ.
ವಿಧಾನಸೌಧದಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ ಅವರ ಕೊಠಡಿಗೆ ಸಚೇತಕ ದೊಡ್ಡನಗೌಡ ಪಾಟೀಲ್ ವಿಪ್ ಅಂಟಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದೊಡ್ದನಗೌಡ ಪಾಟೀಲ್, ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಒಟ್ಟಾರೆ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ನಡೆ ತೀವ್ರ ಕುತೂಹಲ ಮೂಡಿಸಿದ್ದು, ಯಾವ ಅಭ್ಯರ್ಥಿ ಪರ ಮತ ಚಲಾಯಿಸಲಿದ್ದಾರೆ ಎಂಬುದು ಪ್ರಶ್ನೆಯಾಗಿದೆ.