
ಕಾರವಾರ: ಇಂದು ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ,
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗಿ ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಬನವಾಸಿಯಲ್ಲಿ ಇಂದು ವಿವೇಕ್ ಹೆಬ್ಬಾರ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೆ ಸಮಯ ನಿಗದಿಯಾಗಿದೆ. ಶಿವರಾಮ್ ಹೆಬ್ಬಾರ್ ಕೂಡ ಬಿಜೆಪಿಯಿಂದ ದೂರವಾಗಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.