ಬೆಂಗಳೂರು: ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿವಿಧ ಯೋಜನೆಗಳ ಘೋಷಣೆ ಮಾಡಲಾಗಿದೆ. ರಾಜ್ಯ ಕಾರ್ಮಿಕ ಇಲಾಖೆಯಿಂದ ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ನೀಡಲಾಗುವುದು. ತರಬೇತಿಯ ಸಂಪೂರ್ಣ ವೆಚ್ಚವನ್ನು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ವೆಚ್ಚ ಭರಿಸಲಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 600ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ನೆರವು ನೀಡಲಾಗುತ್ತದೆ. ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಪ್ರೋತ್ಸಾಹ ಧನ ನೀಡಲಾಗುವುದು. 2500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈಗ ನೀಡುತ್ತಿರುವ ಹಣ ಶೈಕ್ಷಣಿಕ ಪ್ರೋತ್ಸಾಹಧನದ ಜೊತೆಗೆ 10,000 ರೂ. ವಿಶೇಷ ಪ್ರೋತ್ಸಾಹ ಧನ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಭೆ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.