ಬೆಂಗಳೂರು: ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಬಿತರ ಕುಟುಂಬದವರಿಗೆ ಆರೋಗ್ಯ ಸೌಲಭ್ಯ ಒದಗಿಸಲು ಮತ್ತೊಂದು ಕ್ರಮಕೈಗೊಳ್ಳಲಾಗಿದ್ದು, ಸಂಚಾರಿ ಕ್ಲಿನಿಕ್ ಆರಂಭಿಸಲಾಗುವುದು.
ಕಾರ್ಮಿಕ ಇಲಾಖೆಯಿಂದ ‘ಶ್ರಮಿಕ ಸಂಜೀವಿನಿ’ ಯೋಜನೆ ಜಾರಿಗೆ ಅಂತಿಮ ಹಂತದ ಸಿದ್ಧತೆ ಕೈಗೊಳ್ಳಲಾಗಿದೆ. ಪ್ರಾಯೋಗಿಕವಾಗಿ ಮೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಆರಂಭಿಸಲಾಗುತ್ತದೆ. ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಇದಾಗಿದ್ದು, ಶ್ರಮಿಕ ವರ್ಗದವರು ಇರುವಲ್ಲಿಯೇ ಉಚಿತವಾಗಿ ಆರೋಗ್ಯ ಸೇವೆ ಒದಗಿಸಲಾಗುತ್ತದೆ.
ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಸಂಚಾರಿ ಕ್ಲಿನಿಕ್ ಗಳಲ್ಲಿ ಪ್ರಥಮ ಚಿಕಿತ್ಸೆ, ಪ್ರಯೋಗಾಲಯ ಪರೀಕ್ಷೆಗಳು, ಕೋವಿಡ್ ಪರೀಕ್ಷೆ, ಪ್ರಸವ ಪೂರ್ವ ಮತ್ತು ನಂತರದ ಸೇವೆಗಳು, ಚುಚ್ಚುಮದ್ದು ಸೇವೆಗಳು ಸೇರಿದಂತೆ ಹಲವು ಆರೋಗ್ಯ ಸೇವೆಗಳನ್ನು ಸ್ಥಳದಲ್ಲಿಯೇ ಉಚಿತವಾಗಿ ಒದಗಿಸಲಾಗುತ್ತದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.