alex Certify ಎಲ್ಲ ಕಾರ್ಮಿಕರಿಗೆ ಗುಡ್ ನ್ಯೂಸ್: ವೇತನ ಪರಿಷ್ಕರಣೆ, ಸಕ್ಕರೆ ಉದ್ದಿಮೆ ಕಾರ್ಮಿಕರಿಗೆ ಪರಿಹಾರದ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲ ಕಾರ್ಮಿಕರಿಗೆ ಗುಡ್ ನ್ಯೂಸ್: ವೇತನ ಪರಿಷ್ಕರಣೆ, ಸಕ್ಕರೆ ಉದ್ದಿಮೆ ಕಾರ್ಮಿಕರಿಗೆ ಪರಿಹಾರದ ಭರವಸೆ

ಬೆಳಗಾವಿ: ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯದ ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ವೇತನ ಪರಿಷ್ಕರಣೆ ಕುರಿತಾಗಿ ನಡೆದ ತ್ರಿಪಕ್ಷೀಯ ವೇತನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

2018ರಲ್ಲಿ ವೇತನ ಹೆಚ್ಚಳ ಕುರಿತಂತೆ ಆದ ಒಪ್ಪಂದದ ನಿಯಮಗಳನ್ನು ಜಾರಿಗೆ ತರಲಾಗುವುದು. ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಕಾರ್ಮಿಕರ ವೇತನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಎಲ್ಲಾ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದಲ್ಲದೇ, ವಿಧಾನಮಂಡಲ ಅಧಿವೇಶನದಲ್ಲಿಯೂ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...