ಬೆಂಗಳೂರು: ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಅಂಬಿಗರ ಚೌಡಯ್ಯ ಪ್ರತಿಮೆ ಸ್ಥಾಪನೆ, ಸಾಂಸ್ಕೃತಿಕ ಭವನಕ್ಕೆ 5 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ. ಮೈಸೂರು ವಿಶ್ವವಿದ್ಯಾಲಯ ನೀಡಿದ ವರದಿ ಸ್ವೀಕರಿಸಿ ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಂಬಿಗರ ಚೌಡಯ್ಯ ಪ್ರತಿಮೆ ಸ್ಥಾಪನೆ ಬಗ್ಗೆ ಹಲವು ಸ್ಥಳ ಪರಿಶೀಲನೆ ನಡೆಸಿದ್ದು, ಸ್ಥಳ ಅಂತಿಮವಾದ ನಂತರ ಪ್ರತಿಮೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.