alex Certify BIG NEWS: ಮೊದಲ ಅವಧಿಯಲ್ಲೇ ಸಂಸದ ನಾರಾಯಣಸ್ವಾಮಿಗೆ ಖುಲಾಯಿಸಿದ ಅದೃಷ್ಟ, ರಾಜ್ಯದ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೊದಲ ಅವಧಿಯಲ್ಲೇ ಸಂಸದ ನಾರಾಯಣಸ್ವಾಮಿಗೆ ಖುಲಾಯಿಸಿದ ಅದೃಷ್ಟ, ರಾಜ್ಯದ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ

ನವದೆಹಲಿ: ಪ್ರಧಾನಿ ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಿದ್ದು, ರಾಜ್ಯದ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ ನೀಡಲಾಗಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದ ನಾರಾಯಣಸ್ವಾಮಿ ಮೊದಲ ಅವಧಿಯಲ್ಲೇ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೀದರ್ ಸಂಸದ ಭಗವಂತ ಖೂಬಾ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಮತ್ತು ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯದಿಂದ ಕೇಂದ್ರ ಸಚಿವರಾದ ನಾಲ್ವರು ಕೂಡ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...