ಚೆನ್ನೈ: ತಮಿಳುನಾಡಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮದ್ರಾಸ್ ಹೈಕೋರ್ಟ್ ನಲ್ಲಿ ಕ್ಷಮೆಕೋರಿರುವ ಘಟನೆ ನಡೆದಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಲೆ ಹೇಳಿಕೆ ನೀಡಿದ್ದರು. ಶೋಭಾ ಕರಂದ್ಲಾಜೆ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ತಮಿಳುನಾಡಿನ ಜನಪ್ರತಿನಿಧಿಗಳು, ಅಲ್ಲಿನ ಸರ್ಕಾರ ಸಚಿವರ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ಕೂಡ ದಾಖಲಿಸಲಾಗಿತ್ತು.
ಇದೀಗ ಈ ಪ್ರಕರಣದ ಅರ್ಜಿ ವಿಚಾರಣೆ ಮದ್ರಾಸ್ ಹೈಕೋರ್ಟ್ ನಲ್ಲಿ ನಡೆದಿದ್ದು, ಶೋಭಾ ಕರಂದ್ಲಾಜೆ ಪರ ವಕೀಲರು ಸಚಿವರು ಕ್ಷೆಯಾಚಿಸುವುದಾಗಿ ಹೈಕೋರ್ಟ್ ನಲ್ಲಿ ತಿಳಿಸಿದ್ದರು. ಅದರಂತೆ ಶೋಭಾ ಕರಂದ್ಲಾಜೆ, ತಮಿಳುನಾಡಿನ ಇತಿಹಾಸ, ಶ್ರೀಮಂತ ಸಂಸ್ಕೃತಿ, ಇಲ್ಲಿನ ಜನತೆ ಬಗ್ಗೆ ನನಗೆ ಗೌರವವಿದೆ. ತಮಿಳುನಾಡಿನ ಜನರ ಭಾವನೆಗಳನ್ನು ನೋಯಿಸುವ ಉದ್ದೇಶ ನನ್ನದಾಗಿರಲಿಲ್ಲ. ನನ್ನ ಹೇಳಿಕೆಯಿಂದ ನೋವುಂಟಾಗಿದ್ದಕ್ಕೆ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.