
ಚಿಕ್ಕಮಗಳೂರು: ‘ಗೋ ಬ್ಯಾಕ್ ಶೋಭಾ ಕರಂದ್ಲಾಜೆ’ ಅಭಿಯಾನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ನಾಯಕರೊಂದಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಿದ್ದಾರೆ.
ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಅವರು ಸಭೆ ನಡೆಸಿದ್ದಾರೆ. ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ದು, ಅಭಿಯಾನದ ಬಗ್ಗೆ ಯಡಿಯೂರಪ್ಪ ಮಾಹಿತಿ ಪಡೆದುಕೊಂಡಿದ್ದಾರೆ. ಇಂತಹ ಅಭಿಯಾನಕ್ಕೆ ಹೆದರಬೇಕಿಲ್ಲ ಎಂದು ಸಭೆಯಲ್ಲಿ ಕಾರ್ಯಕರ್ತರಿಗೆ ಯಡಿಯೂರಪ್ಪ ಹೇಳಿದ್ದಾರೆ.
ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಯಡಿಯೂರಪ್ಪ ಕಿಡಿ ಕಾರಿದ್ದು, ಇದು ಷಡ್ಯಂತ್ರದ ಒಂದು ಭಾಗವಾಗಿದೆ. ಮೂರು ದಿನದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಬಹುದು. ಮೋದಿ ಸಂಪುಟದಲ್ಲಿ ಶೋಭಾ ಕರಂದ್ಲಾಜೆ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.