ಬೆಂಗಳೂರು: ಕೇಂದ್ರ ಸಚಿವೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಆಯೋಗಕ್ಕೆ ಮತ್ತೊಂದು ದೂರು ನೀಡಿದ್ದಾರೆ.
ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಹಾಗೂ ಭಾಷಣಕ್ಕೆ ನಿರ್ಬಂಧ ವಿಧಿಸುವಂತೆ ರಾಜ್ಯ ಕಾಂಗ್ರೆಸ್ ಮುಖಂಡ ಕುಶಾಲ್ ಹರುವೇಗೌಡ ಮುಖ್ಯಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಜನರು ವಾಸಿಸುವ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ಶೋಭಾ ಕರಂದ್ಲಾಜೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಇಲ್ಲಿನ ಜನರಲ್ಲಿ ಆತಂಕ ಸೃಷ್ಟಿಸಿದೆ. ಶಾಂತಿ-ಸೌಹಾರ್ದತೆ ಕದಡುವಂತಹ ಹೇಳಿಕೆಗಳನ್ನೇ ನೀಡುವಂತ ಶೋಭಾ ಕರಂದ್ಲಾಜೆ ತಮ್ಮ ರಾಜಕೀಯ ಜೀವನದ ಭಾಷಣದ ಇತಿಹಾಸ ಹೊಂದಿದ್ದಾರೆ. ಪ್ರಚೋದನಕಾರಿ ಭಾಷಣಕ್ಕೆ ಹೆಸರಾಗಿರುವ ಶೋಭಾ ಕರಂದ್ಲಾಜೆ ಭಾಷಣಕ್ಕೆ ಚುನಾವಣಾ ಪ್ರಚಾರದಲ್ಲಿ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ.